ಮನೆ ಮನೆಗು ತ್ರಿವರ್ಣ ಧ್ವಜ ಅಭಿಯಾನದ ಸಭೆ
ವಿಜಯಪುರ, 09 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಮಖಂಡಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಭಾಂಗಣದಲ್ಲಿ ಮನೆ ಮನೆಗು ತ್ರಿವರ್ಣ ಧ್ವಜ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು. ಶಾಸಕ ಜಗದೀಶ ಗುಡಗುಂಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ಮೇಲೆ ಪ್ರತಿ
ಸಭೆ


ವಿಜಯಪುರ, 09 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಮಖಂಡಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಭಾಂಗಣದಲ್ಲಿ ಮನೆ ಮನೆಗು ತ್ರಿವರ್ಣ ಧ್ವಜ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು.

ಶಾಸಕ ಜಗದೀಶ ಗುಡಗುಂಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ಮೇಲೆ ಪ್ರತಿ ಭಾರತೀಯ ಮನೆ ಮೇಲೆ ಧ್ವಜ ಹಾರಿಸಲು ಅವಕಾಶ ಕಲ್ಪಿಸಿ ರಾಷ್ಟ್ರಪ್ರೇಮ ಮೆರೆದಿದ್ದಾರೆ. ಇದು ಪ್ರತಿಯೊಬ್ಬರ ಮನಸ್ಸಿನಲ್ಲಿ ಮೂಡುವಂತೆ ಮಾಡಿದ್ದಾರೆ ಎಂದರು. ಅದಕ್ಕಾಗಿ ಆ.10 ರಿಂದ 13ರವರೆಗೆ ಪ್ರತಿಯೊಬ್ಬ ಕಾರ್ಯಕರ್ತನ ಮನೆ ಮೇಲೆ ಧ್ವಜ ಹಾರಿಸಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande