ಬೆಂಗಳೂರು, 09 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ 2025 ನೇ ಸಾಲಿನ ಮುಂಗಾರು ಹಂಗಾಮಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು” ಬೆೆಂಗಳೂರು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಬೆಂಗಳೂರು ನಗರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ), ಮತ್ತು ಟೊಮ್ಯಾಟೋ ಬೆಳೆಗಳನ್ನು ಇತರೆ ಬೆಳೆಗಳಾಗಿ ಅಧಿಸೂಚಿಸಲಾಗಿದ್ದು, ರಾಗಿ, ಭತ್ತ ಮತ್ತು ಮುಸುಕಿನ ಜೀಳ ಬೆಳೆಗಳಿಗೆ ಆಗಸ್ಟ್ 16 ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಿದ್ದು, ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ , ಕರ್ನಾಟಕ ಒನ್ ಅಥವಾ ಬ್ಯಾಂಕ್ ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ , FRUTTS ಗುರುತಿನ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ. ಆಯ್ಕೆಯಾಗಿರುವ ವಿಮಾ ಸಂಸ್ಥೆ: ಅಗ್ರಿಕಲ್ಚರ್ ಇನ್ಯೂರನ್ಸ್ ಕಂಪೆನಿ ಆಫ್ ಇಂಡಿಯಾ ಲಿ. (ಟೋಲ್ ಪ್ರೀ ನಂ: 1800-4250 505) ಸಂರ್ಕಿಸಬಹುದು.
ರೈತರು ಅಂದಾಜು / ಅಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೆ ವಿಮೆಗೆ ನೋಂದಾಯಿಸಿಕೊಳ್ಳಬಹುದು ಹಾಗೂ ಬಿತ್ತನೆ ದೃಢೀಕರಣದ ಅವಶ್ಯಕತೆ ಇರುವುದಿಲ್ಲ. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗಧಿಪಡಿಸಿದ ಅವಧಿಯೊಳಗಾಗಿ ತಾವು ನೋಂದಾಯಿಸಿದ ಕೇಂದ್ರಗಳಿಗೆ ತೆರಳಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು ಎಂದು ಬೆಂಗಳೂರು ನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa