ಜಮ್ಮು-ಕಾಶ್ಮೀರ : ಕಿಶ್ತ್ವಾರ್‌ನಲ್ಲಿ 26 ಮನೆಗಳ ಮೇಲೆ ಪೊಲೀಸರ ದಾಳಿ
ಕಿಶ್ತ್ವಾರ್, 09 ಆಗಸ್ಟ್ (ಹಿ.ಸ.) : ಆ್ಯಂಕರ್ : ಭಯೋತ್ಪಾದಕ ಜಾಲಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ಕಿಶ್ತ್ವಾರ್ ಜಿಲ್ಲೆಯಲ್ಲಿ ವಿಸ್ತೃತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕ ಮೊಹಮ್ಮದ್ ಅಮೀನ್ ಭಟ್ ಅಲಿಯಾಸ್ ಜಹಾಂಗ
Search


ಕಿಶ್ತ್ವಾರ್, 09 ಆಗಸ್ಟ್ (ಹಿ.ಸ.) :

ಆ್ಯಂಕರ್ : ಭಯೋತ್ಪಾದಕ ಜಾಲಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ಕಿಶ್ತ್ವಾರ್ ಜಿಲ್ಲೆಯಲ್ಲಿ ವಿಸ್ತೃತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕ ಮೊಹಮ್ಮದ್ ಅಮೀನ್ ಭಟ್ ಅಲಿಯಾಸ್ ಜಹಾಂಗೀರ್ ಸರೂರಿ ಅವರ ಮನೆ ಸೇರಿದಂತೆ ಒಟ್ಟು 26 ಮನೆಗಳ ಮೇಲೆ ದಾಳಿ ನಡೆದಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ನಲ್ಲಿರುವ ಸಕ್ರಿಯ ಭಯೋತ್ಪಾದಕರ ಮನೆಗಳೊಂದಿಗೆ, ಗಡಿಯುದ್ದಕ್ಕೂ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದವರ ಮನೆಗಳಲ್ಲಿ ಶೋಧ ನಡೆಸಲಾಗಿದೆ.

ಈ ದಾಳಿ, ಹತ್ತಿರದ ದೋಡಾ ಜಿಲ್ಲೆಯ 15 ಸ್ಥಳಗಳಲ್ಲಿ ಶುಕ್ರವಾರ ನಡೆದ ಶೋಧ ಕಾರ್ಯಾಚರಣೆಗಳ ನಂತರದ ಕ್ರಮವಾಗಿದೆ. ಕಿಶ್ತ್ವಾರ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲವಾರು ಪೊಲೀಸ್ ತಂಡಗಳು ಏಕಕಾಲದಲ್ಲಿ ಶೋಧ ನಡೆಸಿ ಮಾಹಿತಿ ಸಂಗ್ರಹಿಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande