ಕಾಯಕ ದಾಸೋಹಿ ನುಲಿಯ ಚಂದಯ್ಯ : ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ್
ಬಳ್ಳಾರಿ, 09 ಆಗಸ್ಟ್ (ಹಿ.ಸ.) : ಆ್ಯಂಕರ್ : 12ನೇ ಶತಮಾನದ ಅನುಭವ ಮಂಟಪದಲ್ಲಿ ವಚನಕಾರರಾಗಿದ್ದ ನುಲಿಯ ಚಂದಯ್ಯ ಅವರು ಕಾಯಕ ದಾಸೋಹಿಗಳಾಗಿದ್ದರು ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಿಗಿ ನಾಗರಾಜ್ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ
ಕಾಯಕ ದಾಸೋಹಿ ನುಲಿಯ ಚಂದಯ್ಯ: ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ್


ಕಾಯಕ ದಾಸೋಹಿ ನುಲಿಯ ಚಂದಯ್ಯ: ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ್


ಕಾಯಕ ದಾಸೋಹಿ ನುಲಿಯ ಚಂದಯ್ಯ: ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ್


ಬಳ್ಳಾರಿ, 09 ಆಗಸ್ಟ್ (ಹಿ.ಸ.) :

ಆ್ಯಂಕರ್ : 12ನೇ ಶತಮಾನದ ಅನುಭವ ಮಂಟಪದಲ್ಲಿ ವಚನಕಾರರಾಗಿದ್ದ ನುಲಿಯ ಚಂದಯ್ಯ ಅವರು ಕಾಯಕ ದಾಸೋಹಿಗಳಾಗಿದ್ದರು ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಿಗಿ ನಾಗರಾಜ್ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಕಾಯಕಯೋಗಿ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದ ವಚನಕಾರರ ಕಾಲದ ಕಾಯಕಜೀವಿಗಳು ಯಾವ ಸಮುದಾಯವೂ ನಮ್ಮವರೆಂದು ಗುರುತಿಸಿಕೊಳ್ಳಲಾಗದ ರೀತಿಯಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಅದರಲ್ಲಿ ನುಲಿಯ ಚಂದಯ್ಯ ಒಬ್ಬರು ಎಂದು ಹೇಳಿದರು.

ಸಮಾಜ ಹಾಗೂ ಜನ ಸಾಮಾನ್ಯರ ಏಳ್ಗೆಗಾಗಿ ಪರಿತಪಿಸಿದ ವಿವಿಧ ಮಹನೀಯರ ವಿಚಾರಧಾರೆಗಳನ್ನು ನಾವೆಲ್ಲರು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಜೀವನ ನಡೆಸಬೇಕು. ಎಲ್ಲರೂ ಸಂಘಟಿತರಾಗಿ ದುಶ್ಚಟಗಳಿಂದ ದೂರವಿದ್ದು, ಸರ್ಕಾರದ ಯೋಜನೆಗಳನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ನುಲಿಯ ಚಂದಯ್ಯ ಅವರು ಶ್ರೇಷ್ಠ ಕಾಯಕ ಯೋಗಿಯಾಗಿದ್ದರು, ತಮ್ಮ ವೃತ್ತಿಯ ಬಗ್ಗೆ ಅಪಾರ ಗೌರವ ಹೊಂದಿದ್ದವರು. ವೃತ್ತಿಯಿಂದ ಬಂದಂತಹ ಆದಾಯದಲ್ಲಿ ತಮ್ಮ ಜೀವನಕ್ಕೆ ಅಲ್ಪ ವ್ಯಯಮಾಡಿಕೊಂಡು ಉಳಿದ ಹಣದಲ್ಲಿ ಜಂಗಮರ ದಾಸೋಹಕ್ಕಾಗಿ ಮೀಸಲಿಟ್ಟಿದ್ದು, ಅವರ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಸಿಂಧನೂರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಗಂಗಾಧರ.ಎಲ್ ಅವರು ಉಪನ್ಯಾಸದಲ್ಲಿ ಮಾತನಾಡಿ, ನುಲಿಯ ಚಂದಯ್ಯನವರು ಸುಮಾರು ಕ್ರಿ.ಶ.1,130 ರಲ್ಲಿ ವಿಜಯಪುರ ಜಿಲ್ಲೆಯ ಶಿವಣಿಗೆ ಗ್ರಾಮದಲ್ಲಿ ಜನಿಸಿದರು. ನಂತರ ಬಸವಣ್ಣನ ಕಾರ್ಯಕ್ಷೇತ್ರ ಕಲ್ಯಾಣಕ್ಕೆ ಬಂದರು. ಕಲ್ಯಾಣದ ಕೆರೆಗಳಲ್ಲಿ ಸಿಗುವ ಹೊಡಕೆ, ಚೇಣಿ ಮುಂತಾದ ನಾರುಗಳಿಂದ ಹಗ್ಗ ಹೊಸೆದು ಮಾರಾಟ ಮಾಡಿ ಬಂದ ಹಣದಿಂದ ಜಂಗಮ ದಾಸೋಹ ನಡೆಸುತ್ತಿದ್ದರು. ಈ ರೀತಿ ನುಲಿಯ ಕಾಯಕದಿಂದಾಗಿ ಮುಂದೆ ನುಲಿಯ ಚಂದಯ್ಯನೆಂದು ಹೆಸರಾದರು ಎಂದು ತಿಳಿಸಿದರು.

ಕಲ್ಯಾಣದಲ್ಲಿ 1160ರ ವೇಳೆಯಲ್ಲಿ ನಡೆಯುತ್ತಿದ್ದ ಅನುಭವ ಗೋಷ್ಠಿಗಳಲ್ಲಿ ಇವರು ಚಂದೇಶ್ವರ ಲಿಂಗ ಎಂಬ ಅಂಕಿತನಾಮದಲ್ಲಿ ಸುಮಾರು 48 ವಚನ ರಚಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕೊರವ ಸಮಾಜದ ಜಿಲ್ಲಾಧ್ಯಕ್ಷ ಶ್ರೀರಾಮುಲು, ಗೌರವಾಧ್ಯಕ್ಷ ಶಂಕರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಸೇರಿದಂತೆ ಸಮುದಾಯದ ಮುಖಂಡರು, ಮಹಿಳೆಯರು ಹಾಗೂ ಇತರರು ಉಪಸ್ಥಿತರಿದ್ದರು.

ಅದ್ದೂರಿ ಮೆರವಣಿಗೆ :

ಕಾಯಕಯೋಗಿ ನುಲಿಯ ಚಂದಯ್ಯ ಜಯಂತ್ಯೋತ್ಸವ ಅಂಗವಾಗಿ ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಪೂರ್ಣ ಕುಂಭ ಹೊತ್ತ ಮಹಿಳೆಯರು ಹಾಗೂ ಸಾಂಸ್ಕೃತಿಕ ಕಲಾತಂಡಗಳು ಗಮನ ಸೆಳೆದವು.

ಮೆರವಣಿಗೆಯು ನಗರದ ಕೊರವ ಸಮುದಾಯ ಭವನ ಆವರಣದಿಂದ ಆರಂಭವಾಗಿ ಕೊರವ ಬೀದಿ-ಸುಂಕ್ಲಮ್ಮ ದೇವಸ್ಥಾನ-ಕೌಲ್ ಬಜಾರ್ ಮುಖ್ಯರಸ್ತೆ-ವಾಲ್ಮೀಕಿ ಭವನ-ಡಾ.ಬಾಬು ಜಗಜೀವನರಾಂ ಭವನದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande