ನೂಲಿಯ ಚಂದಯ್ಯ ವಿಚಾರಧಾರೆ ಮನೆ-ಮನೆಗೆ ತಲುಪಲಿ- ಸಚಿವ ಎನ್ಎಸ್ ಬೋಸರಾಜು
ರಾಯಚೂರು, 09 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಾಯಕವೇ ಶ್ರೇಷ್ಠವೆಂದು ಕಾಯಕ ಪರಂಪರೆಗೆ ಶಕ್ತಿ ನೀಡಿದ ಶ್ರೀ ನುಲಿಯ ಚಂದಯ್ಯರು ವಚನಗಳ ಮೂಲಕ ಸಮಾಜದ ಏಳ್ಗೆಗೆ ಶ್ರಮಿಸಿದ ಮಹಾನ್ ನಾಯಕರಾಗಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳ
ನೂಲಿಯ ಚಂದಯ್ಯ ಅವರ ವಿಚಾರಧಾರೆ ಮನೆ-ಮನೆಗೆ ತಲುಪಲಿ- ಸಚಿವ ಎನ್ಎಸ್ ಬೋಸರಾಜು


ರಾಯಚೂರು, 09 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಾಯಕವೇ ಶ್ರೇಷ್ಠವೆಂದು ಕಾಯಕ ಪರಂಪರೆಗೆ ಶಕ್ತಿ ನೀಡಿದ ಶ್ರೀ ನುಲಿಯ ಚಂದಯ್ಯರು ವಚನಗಳ ಮೂಲಕ ಸಮಾಜದ ಏಳ್ಗೆಗೆ ಶ್ರಮಿಸಿದ ಮಹಾನ್ ನಾಯಕರಾಗಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಪಂ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕೊರಮ ಹಾಗೂ ಕೊರಚ ಸಮಾಜದ ಸಹಯೋಗದಲ್ಲಿ ನಗರದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಆಯೋಜಿಸಿದ್ದ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ನೂಲಿ ಚಂದಯ್ಯ ಅವರ ಚಿಂತನೆಗಳು ಸಮಾಜದಲ್ಲಿ ಮುಂದೆ ಸಾಗಬೇಕು. ಎಲ್ಲ ಸಮುದಾಯ ಒಟ್ಟಾಗಿ ಸೇರಿ ನುಲಿಯ ಶ್ರೀ ನುಲಿಯ ಚಂದಯ್ಯನವರ ಜಯಂತಿ ಆಚರಣೆ ಮಾಡುವ ಮೂಲಕ ಅವರ ಅವರ ಹಾದಿಯಲ್ಲಿ ಮುನ್ನಡೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರರಾದ ಸುರೇಶ ವರ್ಮಾ, ಮಹಾನಗರ ಪಾಲಿಕೆ‌ ಪ್ರಭಾರಿ ಮಹಾ ಪೌರರಾದ ಸಾಜಿದ್ ಸಮೀರ್, ಕಾಂಗ್ರೆಸ್ ಹಿರಿಯ ಮುಖಂಡರಾದ ಕೆ ಶಾಂತಪ್ಪ, ಜಿ ಶಿವಮೂರ್ತಿ ಜಿಲ್ಲಾ ಕಾರ್ಯದರ್ಶಿಗಳಾದ ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ ಬಸವರಾಜ ಪಾಟೀಲ್ ಅತ್ತನೂರು, ರಾಯಚೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ,‌ಲಕ್ಷ್ಮೀ ರಡ್ಡಿ, ಹುಲುಗಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande