ರಾಯಚೂರು, 09 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಆಗಸ್ಟ್ 8ರಂದು ರಾಯಚೂರ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ಸಗಮಕುಂಟಾ, ಇಬ್ರಾಹಿಂದೊಡ್ಡಿ, ಕೊರ್ತಕುಂದ, ಮಾಮಡದೊಡ್ಡಿ, ಯರಗುಂಟಾ, ವಡ್ಡೆಪಲ್ಲಿ ಗ್ರಾಮಗಳಲ್ಲಿ ಸಂಚರಿಸಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಸಗಮಕುಂಟಾ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಆಂಜನೇಯ್ಯ ದೇವಸ್ಥಾನ, ಶ್ರೀ ಕರೆಮ್ಮ ಗುಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಇಬ್ರಾಹಿಂದೊಡ್ಡಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಜೊತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಆಂಜನೇಯ್ಯ ದೇವಸ್ಥಾನ, ಶ್ರೀ ಮಾರೆಮ್ಮ ಗುಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಕೊರ್ತಕುಂದ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಆಂಜನೇಯ್ಯ ದೇವಸ್ಥಾನ ಕಾಮಗಾರಿಗೆ ಮತ್ತು ಅಭಿವೃದ್ಧಿ ಆರಾಧನಾ ಯೋಜನೆಯಡಿ ಶ್ರೀ ಬೆಟ್ಟದ ಮಲ್ಲಿಕಾರ್ಜುನ ದೇವಸ್ಥಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಯರಗುಂಟಾ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಆಂಜನೇಯ್ಯ ದೇವಸ್ಥಾನ ಅಭಿವೃದ್ಧಿಗೆ ಚಾಲನೆ ನೀಡಿದರು.
ಮಾಮಡದೊಡ್ಡಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಆಂಜನೇಯ ದೇವಸ್ಥಾನ ಅಭಿವೃದ್ಧಿಗೆ ಮತ್ತು ವಡ್ಡೆಪಲ್ಲಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ
ಮ್ಯಾಕ್ರೋ ಯೋಜನೆಯಡಿ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಜೊತೆಗೆ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದೇವಸೂಗುರ ಬ್ಲಾಕ್ ಅಧ್ಯಕ್ಷರು, ಸಗಮಕುಂಟಾ, ಇಬ್ರಾಹಿಂದೊಡ್ಡಿ, ಕೊರ್ತಕುಂದ, ಮಾಮಡದೊಡ್ಡಿ, ಯರಗುಂಟಾ, ವಡ್ಡೆಪಲ್ಲಿ ಗ್ರಾಮಗಳ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮನಿರ್ದೆಶನ ಸದಸ್ಯರು, ಅಧಿಕಾರಿಗಳು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್