ವಿಜಯಪುರ, 09 ಆಗಸ್ಟ್ (ಹಿ.ಸ.) :
ಆ್ಯಂಕರ್ : ಒಳ ಮಿಸಲಾತಿ ವರದಿ ಸಂಪುಟ ಸಭೆಗೆ ಸಲ್ಲಿಕೆಯಾಗಿದೆ ಎಂದು ಸಚಿವ ಎಂ. ಬಿ. ಪಾಟೀಲ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, 1300 ಪುಟಗಳ ವರದಿ ಸಲ್ಲಿಕೆಯಾಗಿದೆ. ಅದನ್ನು ನಾವ್ಯಾರು ಓದಿಲ್ಲ. ಓದಿ ತಿಳಿದುಕೊಂಡು ಮಾತನಾಡಬೇಕಿದೆ. ಆಗಸ್ಟ್ 16 ರಂದು ನಡೆಯುವ ಸಂಪುಟ ಸಭೆಗೆ ಬರಲಿದೆ ಎಂದರು.
ವಿಜಯಪುರದಲ್ಲಿ ಸಚಿವ ಸಂಪುಟ ಸಭೆ ನಡೆಯುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ವಿಜಯಪುರ ನಗರದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande