ನುಲಿಯ ಚಂದಯ್ಯ ಜಯಂತಿ ಆಚರಣೆ, ಮೆರವಣಿಗೆ
ವಿಜಯಪುರ, 09 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಾಯಕತತ್ವದ ಮಹತ್ವ ಸಾರಿದ ನುಲಿಯ ಚಂದಯ್ಯನವರ ಜಯಂತ್ಯೋತ್ಸವದ ನಿಮಿತ್ತ ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಸಚಿವ ಎಂ. ಬಿ. ಪಾಟೀಲ ಪುಷ್ಪ ನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ತದನಂತರ
ಮೆರವಣಿಗೆ


ವಿಜಯಪುರ, 09 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಾಯಕತತ್ವದ ಮಹತ್ವ ಸಾರಿದ ನುಲಿಯ ಚಂದಯ್ಯನವರ ಜಯಂತ್ಯೋತ್ಸವದ ನಿಮಿತ್ತ ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಸಚಿವ ಎಂ. ಬಿ. ಪಾಟೀಲ ಪುಷ್ಪ ನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ತದನಂತರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾತನಾಡಿ,ಕಾಯಕ ಶರಣರ ತತ್ವಾದರ್ಶಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿವೆ. ಶರಣರ ಕಾಯಕ ಕಲ್ಪನೆಯ ತತ್ವಾದರ್ಶಗಳನ್ನು ಅವರ ಜೀವನ ಸಂದೇಶ ಬಹುಮೂಲ್ಯ ವಿಷಯಗಳನ್ನು ಜನಸಾಮಾನ್ಯರು ತಮ್ಮ ಜೀವನಗಳಲ್ಲಿ ಅಳವಡಿಕೊಂಡು ಶರಣರು ತೋರಿದ ಮಾರ್ಗದಲ್ಲಿ ಸಾಗಬೇಕು ಎಂದು ಹೇಳಿದರು.

ಮೆರವಣಿಗೆ ಬಸವೇಶ್ವರ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತ್ತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಸಮಾಜ‌ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸೇರಿದಂತೆ ಹಲವು ಅಧಿಕಾರಿಗಳು, ಸಮಾಜದ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande