ವಿಜಯಪುರ, 09 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ.
ಗುಳೇದಗುಡ್ಡ ಪಟ್ಟಣದ ವಿದ್ಯಾರ್ಥಿನಿ ಅಂಜಲಿ ಮುಂಡಾಸ್(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಭಂಡಾರಿ ಕಾಲೇಜಿನ ಸಹಪಾಠಿಗಳ ಕಿರುಕುಳ ನೀಡಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಾಲೇಜ್ ನ ಮೂವರು ವಿದ್ಯಾರ್ಥಿಗಳು ನನಗೆ ಕಿರುಕುಳ ನೀಡಿದ್ದಾರೆ. ಮೂವರು ವಿದ್ಯಾರ್ಥಿಗಳನ್ನು ಸುಮ್ಮನೆ ಬಿಡಬೇಡಿ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಕಾಲೇಜ್ ವಿದ್ಯಾರ್ಥಿಗಳಾದ ಹರ್ಷಾ,ಪ್ರದೀಪ್ ಸೇರಿ ಮೂವರು ವಿದ್ಯಾರ್ಥಿಗಳಿಂದ ಕಿರುಕುಳ ನೀಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande