ವಿಜಯಪುರ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವೈದ್ಯಕೀಯ ಕಾಲೇಜು ಹೆಸರಿನಲ್ಲಿ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಮಾಡಬಾರದು ಎಂದು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಆಮ್ ಆದ್ಮಿ ಪಾರ್ಟಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಅವಶ್ಯಕತೆ ಇದೆ. ಅದಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದೆ. ಆ ಕಾರಣಕ್ಕಾಗಿ ಸರ್ಕಾರ ವೈದ್ಯಕೀಯ ಕಾಲೇಜಿಗೆ ಸ್ಪಂದನೆ ನೀಡಿದೆ. ಆದ್ರೇ, ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಬೇಡ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ, ಸರ್ಕಾರ ವೈದ್ಯಕೀಯ ಕಾಲೇಜು ಆರಂಭಿಸಲು ಹಣದ ಕೊರತೆಯಿಂದ ಹಿಂದೇಟು ಹಾಕಬಾರದು. ಸರ್ಕಾರ ಸರ್ಕಾರದ ಸಂಸ್ಥೆಗಳನ್ನು ಬಲಪಡಿಸಬೇಕು. ಹೊರತು ಖಾಸಗಿ ಸಂಸ್ಥೆಗಳಿಗೆ ಮಣೆ ಹಾಕಬೇಕಿಲ್ಲ. ಅದಕ್ಕಾಗಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ರದ್ದುಗೊಳಿಸಿ ಸಂಪೂರ್ಣವಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande