ಅಫ್ಘಾನಿಸ್ತಾನ ಭೂಕಂಪ : ಪ್ರಧಾನಿ ಮೋದಿ ಸಂತಾಪ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೂಕಂಪದಲ್ಲಿ 800 ಕ್ಕೂ ಹೆಚ್ಚು ಮಂದಿ ಸಾವಿಗೀಡಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ತಮ್ಮ ಸಂತಾಪ ಸಂದೇಶ ಹಂಚಿಕೊಂ
Pm


ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೂಕಂಪದಲ್ಲಿ 800 ಕ್ಕೂ ಹೆಚ್ಚು ಮಂದಿ ಸಾವಿಗೀಡಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ತಮ್ಮ ಸಂತಾಪ ಸಂದೇಶ ಹಂಚಿಕೊಂಡಿರುವ ಅವರು, ಈ ಭೀಕರ ದುರಂತದಲ್ಲಿ ಜೀವ ಹಾಗೂ ಆಸ್ತಿ ನಷ್ಟವಾಗಿರುವುದು ಅತ್ಯಂತ ನೋವಿನ ಸಂಗತಿ. ಈ ಕಷ್ಟದ ಸಮಯದಲ್ಲಿ ಭಾರತವು ಮೃತರ ಕುಟುಂಬಗಳೊಂದಿಗೆ ನಿಂತಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಪೀಡಿತರಿಗೆ ಸಾಧ್ಯವಿರುವ ಎಲ್ಲಾ ರೀತಿಯ ಮಾನವೀಯ ನೆರವು ಮತ್ತು ಪರಿಹಾರ ಒದಗಿಸಲು ಭಾರತ ಸಿದ್ಧವಿದೆ ಎಂದು ಘೋಷಿಸಿದ್ದಾರೆ. ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಭಾರತವು ಯಾವಾಗಲೂ ಅಂತಾರಾಷ್ಟ್ರೀಯ ಸಹಕಾರದಲ್ಲಿ ಮುಂಚೂಣಿಯಲ್ಲಿರುತ್ತದೆ, ಈ ಬಾರಿಯೂ ಅದೇ ತತ್ವ ಪಾಲನೆಯಾಗುತ್ತದೆ ಎಂದಿದ್ದಾರೆ.

ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಜಲಾಲಾಬಾದ್‌ನಿಂದ 27 ಕಿ.ಮೀ ಪೂರ್ವಕ್ಕೆ ಹಾಗೂ ನೆಲದ 8 ಕಿ.ಮೀ ಆಳದಲ್ಲಿತ್ತು. ಸುಮಾರು 20 ನಿಮಿಷಗಳ ಬಳಿಕ ಅದೇ ಪ್ರದೇಶದಲ್ಲಿ 4.5 ತೀವ್ರತೆಯ ಮತ್ತೊಂದು ಭೂಕಂಪ ದಾಖಲಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande