ಜಮ್ಮು, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಹಾನಿ ಕುರಿತು ಸ್ವತಃ ಪರಿಶೀಲಿಸಿದರು. ಬಳಿಕ ಅವರು ರಾಜ ಭವನದಲ್ಲಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಪರಿಹಾರ ಕ್ರಮಗಳ ಕುರಿತು ಸಮಾಲೋಚನಾ ಸಭೆ ನಡೆಸಿದರು.
ಅಮಿತ್ ಶಾ ಅವರೊಂದಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸುನಿಲ್ ಶರ್ಮಾ ಉಪಸ್ಥಿತರಿದ್ದರು.
ಅಮಿತ್ ಶಾ ಅವರು ಬಿಕ್ರಮ್ ಚೌಕ್ ಬಳಿಯ ತಾವಿ ಸೇತುವೆ ಹಾಗೂ ಜಮ್ಮು ವಿಮಾನ ನಿಲ್ದಾಣದ ಸಮೀಪದ ಮಂಗುಚಕ್ ಪ್ರದೇಶಕ್ಕೆ ಭೇಟಿ ನೀಡಿ ಪ್ರವಾಹದಿಂದ ಉಂಟಾದ ಹಾನಿ ಪರಿಶೀಲಿಸಿದರು.
ಕಳೆದ ವಾರ ಜಮ್ಮು ಪ್ರದೇಶದಲ್ಲಿ ದಾಖಲೆ ಮಳೆಯ ಹಿನ್ನೆಲೆಯಲ್ಲಿ ಹಠಾತ್ ಪ್ರವಾಹ ಉಂಟಾಗಿ ದೊಡ್ಡ ಪ್ರಮಾಣದ ಹಾನಿಯಾಗಿದೆ. ಆಗಸ್ಟ್ 26ರಂದು ಮಾತಾ ವೈಷ್ಣೋದೇವಿ ದೇಗುಲ ಮಾರ್ಗದಲ್ಲಿ ಭೂಕುಸಿತದಿಂದ 34 ಯಾತ್ರಿಕರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa