ರಾಯಚೂರು, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ದೇವದುರ್ಗ ತಾಲೂಕಿನ ಗೋಪುಳಪೂರ ಗ್ರಾಮದ ಹಳ್ಳದ ಪಕ್ಕದಲ್ಲಿ ಆಗಸ್ಟ್ 15ರಂದು ಸುಮಾರು 2 ದಿನದ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದು, ಮಗುವಿನ ಜೈವಿಕ ಪಾಲಕರು ಪತ್ತೆಗೆ ಕೋರಲಾಗಿದೆ.
ಸಾರ್ವಜನಿಕರು ಮಗು ಅಳುವುದನ್ನು ಗಮನಿಸಿ ಮಗುವನ್ನು ರಕ್ಷಿಸಿ ದೇವದುರ್ಗ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ತಾಲ್ಲೂಕು ವೈದ್ಯಾಧಿಕಾರಿಗಳು ಮಕ್ಕಳ ಸಹಾಯವಾಣಿ ಘಟಕಕ್ಕೆ ಕರೆ ಮಾಡಿ ತಿಳಿಸಲಾಗಿದ್ದು, ನಂತರ ಮಕ್ಕಳ ಸಹಾಯವಾಣಿ ಸಿಬ್ಬಂದಿಯವರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ ನಂತರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರ ನಿರ್ದೇಶದಂತೆ ಶಿಶು ಅಭಿವೃದ್ದಿ ಯೋಜನೆ ದೇವದುರ್ಗ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಘಟಕ ಸಿಬ್ಬಂದಿಗಳ ಸಹಕಾರದಲ್ಲಿ ಈ ಮಗುವನ್ನು ಪೋಷಣೆ ಮತ್ತು ರಕ್ಷಣೆಗಾಗಿ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಈ ಮಗುವಿನ ಜೈವಿಕ ಪಾಲಕರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಯಲಯ, ಮನೆ ಸಂಖ್ಯೆ 1-9-138, ಆಜಾದ ನಗರ, ಪಶ್ಚಿಮ ಪೊಲೀಸ್ ಠಾಣೆ ಹಿಂದುಗಡೆ, ಮಾರಮ್ಮ ಗುಡಿ ಹತ್ತಿರ, ರಾಯಚೂರು ಇಲ್ಲಿಗೆ ಸಂಪರ್ಕಿಸುವಂತೆ ಕೋರಲಾಗಿದ್ದು, ಜೈವಿಕ ಪಾಲಕರು ಪತ್ತೆಯಾಗದಿದ್ದಲ್ಲಿ ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ ಕಾನೂನಿನಾತ್ಮಕವಾಗಿ ದತ್ತು ಪ್ರಕ್ರಿಯೆಗೆ ಒಳಪಡಿಸಲಾಗುವುದು.
ಹೆಚ್ಚಿನ ಮಾಹಿತಿಗೆ ಈ ಕಚೇರಿಯ ದೂರವಾಣಿ ಸಂಖ್ಯೆ: 08532-2262266, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮೊಬೈಲ್ ಸಂಖ್ಯೆ:7829981827, ರಕ್ಷಣಾಧಿಕಾರಿ (ಅಸಾಂಸ್ಥಿಕ) ಮೊಬೈಲ್ ಸಂಖ್ಯೆ: 8660627793ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್