ಹೊಸಪೇಟೆ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹರಪನಹಳ್ಳಿ ತಾಲೂಕಿನ ಚಟ್ನಿಹಳ್ಳಿ ಗ್ರಾಮ ಪಂಚಾಯಿಯಲ್ಲಿ 01 ಗ್ರಾಮೀಣ ಪುರ್ನವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವವರು ಕನಿಷ್ಟ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿಬೇಕು. 18 ರಿಂದ 45 ವರ್ಷ ವಯೋಮಿತಿ ಹೊಂದಿರುವ ಹಾಗೂ ಸ್ಥಳೀಯ ವಿಕಲಚೇತನರು ಅವಶ್ಯಕ ದಾಖಲೆಗಳೊಂದಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಸೆ.02 ರಿಂದ 16 ರೊಳಗೆ ಅರ್ಜಿ ಸಲ್ಲಿಸಬಹುದು.
ಚಟ್ನಿಹಳ್ಳಿ ಗ್ರಾಪಂ ಗ್ರಾಮೀಣ ಪುರ್ನವಸತಿ ಕಾರ್ಯಕರ್ತರನ್ನು ಹರಪನಹಳ್ಳಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಮುಖಾಂತರ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹರಪನಹಳ್ಳಿ ತಾಲೂಕಿನ ಎಂಆರ್‍ಡಬ್ಲೂ ಆರ್.ಧನರಾಜ್ ಮೊ.9901182525 ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಾರ್ಯಲಯ, ಆಗಾಪೆ ಎಜಿ ಪ್ರಾರ್ಥನಾಲಯ ಎದುರು ರಸ್ತೆ, ಡಿಸಿ ಸಿವಿಲ್ ಇಂಜಿನಿಯರ್ ಕಟ್ಟಡ, ಅಮರಾವತಿ ಹೊಸಪೇಟೆ, ಇವರನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್