ಹೊಸಪೇಟೆ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿಗೆ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಮೀನುಗಾರರು ಮತ್ತು ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮೀನುಗಾರರು ಮತ್ತು ಮೀನು ಮಾರಾಟಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಸಲು ಶೇ.50 ರಷ್ಟು ಅಥವಾ ಗರಿಷ್ಠ 3 ಲಕ್ಷರೂ ಆರ್ಥಿಕ ನೆರವು ನೀಡಲಾಗುತ್ತದೆ. ಪರಿಶಿಷ್ಟ ಜಾತಿಯವರಿಗೆ 02 ಮತ್ತು ಪರಿಶಿಷ್ಟ ಪಂಗಡದವರಿಗೆ 01 ಗುರಿಗಳು ನಿಗದಿಪಡಿಸಲಾಗಿದೆ.
ಅರ್ಹ ಫಲಾನಿಭವಿಗಳು ಸೆ.15 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ, ಹೂವಿನಹಡಗಲಿ ತಾಲೂಕು ಜಿ.ಶಾಂತ್‍ಕುಮಾರ್ ಮೊ.9620177588, ಕೂಡ್ಲಿಗಿ, ಹೆಚ್.ಬಿ.ಹಳ್ಳಿ, ಕೊಟ್ಟೂರು ತಾಲೂಕು ರಜನೀಶ್ ದೇಸಾಯಿ ಮೊ.7349711866, ಹರಪನಹಳ್ಳಿ ತಾಲೂಕು ಮಂಜುನಾಥ ಮೊ.8217725319 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್