ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರ ಮತ್ತೊಮ್ಮೆ ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 51.50 ರೂ. ಕಡಿಮೆ ಮಾಡಿದ್ದು, ಹೊಸ ದರವು ಇಂದಿನಿಂದ ಜಾರಿಯಾಗಿದೆ.
ಪರಿಷ್ಕರಣೆ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ದರ 1,580 ರೂ. ಆಗಿದೆ. ಆದರೆ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಪ್ರತಿ ತಿಂಗಳು ಎಲ್‌ಪಿಜಿ ದರ ಪರಿಷ್ಕರಣೆ ಮಾಡಲಾಗುತ್ತಿದ್ದು, ಕಳೆದ ಕೆಲ ತಿಂಗಳ ಅವಧಿಯಲ್ಲಿ ವಾಣಿಜ್ಯ ಸಿಲಿಂಡರ್ ದರದಲ್ಲಿ ನಿರಂತರ ಇಳಿಕೆ ಕಂಡು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa