ಧರ್ಮಸ್ಥಳ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಬುರುಡೆ ಪ್ರಕರಣ ಕಾಂಗ್ರೆಸ್ ಪಕ್ಷದ ಬಹುಸಂಖ್ಯಾತರ ವಿರುದ್ಧದ ಇನ್ನೊಂದು ಷಡ್ಯಂತ್ರ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ರಾಜ್ಯ ಬಿಜೆಪಿ ಆಯೋಜಿಸಿದ್ದ ಧರ್ಮಸ್ಥಳ ಚಲೋ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜವನ್ನು ಒಡೆಯುವ ಸಂಚು ಕಾಂಗ್ರೆಸ್‌ನ ರಕ್ತದಲ್ಲೇ ಇದೆ. ಶಬರಿಮಲೆಯ ನಂತರ ಈಗ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗಿದೆ. ಇಂತಹ ಕುತಂತ್ರಗಳನ್ನು ಹಿಂದೂ ಸಮಾಜವೇ ತಿರಸ್ಕರಿಸಬೇಕು ಎಂದು ಕರೆ ನೀಡಿದರು.
ಸರ್ಕಾರದ ಕ್ರಮವನ್ನು ಪ್ರಶ್ನಿಸಿದ ಜೋಶಿ, ಬುರುಡೆ ತಂದವನನ್ನು ಬಂಧಿಸಿ ವಿಚಾರಣೆ ಮಾಡಿದರೆ ಸಾಕಿತ್ತು. ಬದಲಿಗೆ ಏಕೆ ಎಸ್‌ಐಟಿ ರಚನೆ? ಏಕೆ 17 ಜಾಗಗಳನ್ನು ಅಗೆಸುವ ನಾಟಕ?” ಎಂದು ತೀವ್ರ ಟೀಕೆ ಮಾಡಿದರು.
ಹಿಂದೂ ಧಾರ್ಮಿಕ ಕೇಂದ್ರಗಳನ್ನು ಕುಂದಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದಲ್ಲಿ ತೊಡಗಿದೆ. ವೋಟ್ ಬ್ಯಾಂಕ್‌ಗಾಗಿ ಹಿಂದೂಗಳ ಭಾವನೆಗಳನ್ನೇ ಕುಗ್ಗಿಸುತ್ತಿದೆ. ಆದರೆ, ಕೇಂದ್ರದಲ್ಲಿ ಮೋದಿ ಸರ್ಕಾರ ಹಿಂದೂ ಸಮಾಜದ ಪರವಾಗಿ ಗಟ್ಟಿಯಾಗಿ ನಿಂತಿದೆ ಎಂದು ಸಚಿವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa