ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ; ಅರ್ಜಿ ಆಹ್ವಾನ
ಗದಗ, 01 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸಪ್ಟಂಬರ 3 ಮತ್ತು 4 ರಂದು ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗದಲ್ಲಿ ಬೆಳಿಗ್ಗೆ 09-00 ಗಂಟೆಯಿಂದ ಆಯೋಜಿಸಲಾಗಿದ್ದು, ತಾಲೂಕು ಹಂತಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು
ಪೋಟೋ


ಗದಗ, 01 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸಪ್ಟಂಬರ 3 ಮತ್ತು 4 ರಂದು ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗದಲ್ಲಿ ಬೆಳಿಗ್ಗೆ 09-00 ಗಂಟೆಯಿಂದ ಆಯೋಜಿಸಲಾಗಿದ್ದು,

ತಾಲೂಕು ಹಂತಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಮಾತ್ರ ಕಡ್ಡಾಯವಾಗಿ ಈಗಾಗಲೇ ತಾಲೂಕಾ ಹಂತದಲ್ಲಿ ಕೋಡ್ ಬಳಸಿ ಹೆಸರನ್ನು ನೊಂದಾಯಿಸಿ ಭಾಗಹಿಸುವುದು ಕಡ್ಡಾಯವಾಗಿದೆ.

ತಾಲೂಕಾ ಹಂತದಲ್ಲಿ ವಿಜೇತ ಕ್ರೀಡಾಪಟುಗಳು ಮಾತ್ರ ಜಿಲ್ಲಾ ಹಂತದಲ್ಲಿ ಆನ್ಲೈನ್ ಲಿಂಕ್ ಮುಖಾಂತರ ನೊಂದಣಿಯನ್ನು ಕ್ಲೀಕ್ ಮಾಡಿ ತಮ್ಮ ಬ್ಯಾಂಕ ಖಾತೆಯನ್ನು ನಮೂದಿಸುವುದು ಕಡ್ಡಾಯವಾಗಿರುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ ಶರಣು ಗೋಗೇರಿ ತಿಳಿಸಿರುತ್ತಾರೆ.

ಶರತ್ತುಗಳು : ತಾಲೂಕು ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.. ದಸರಾ ಕ್ರೀಡಾಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ.

ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಲ್ಲ

ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ತೀವ್ರ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಸಹಾಯಕ ನಿರ್ದೇಶಕರು ಕೈಗೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ಟೆನ್ನೀಸ್ , ನೆಟ್ಬಾಲ್ ಹಾಗೂ ಈಜು ಸ್ಪರ್ಧೆಗಳಲ್ಲಿ ನೇರವಾಗಿ ಭಾಗವಹಿಸಲು ಸಹಿತ ಲಿಂಕ್ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ದೂರವಾಣಿ ಸಂಖ್ಯೆ 08372-238345 ಗೆ ಸಂಪರ್ಕಿಸಲು ಕೋರಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande