ಗ್ರೂಪ್ ‘ಸಿ’ ಹುದ್ದೆಗಳ ಪರೀಕ್ಷೆ ; ನಿಷೇದಾಜ್ಞೆ ಜಾರಿ
ಹೊಸಪೇಟೆ, 01 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸೆ.02 ಮತ್ತು 03 ರಂದು ನಾನಾ ಇಲಾಖೆಗಳ ಗ್ರೂಪ್ ‘ಸಿ’-16(ಹೈ.ಕ) ವೃಂದದ ಹುದ್ದೆಗಳ ಕನ್ನಡ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ನಿಷೇದಾ
ಗ್ರೂಪ್ ‘ಸಿ’ ಹುದ್ದೆಗಳ ಪರೀಕ್ಷೆ ; ನಿಷೇದಾಜ್ಞೆ ಜಾರಿ


ಹೊಸಪೇಟೆ, 01 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸೆ.02 ಮತ್ತು 03 ರಂದು ನಾನಾ ಇಲಾಖೆಗಳ ಗ್ರೂಪ್ ‘ಸಿ’-16(ಹೈ.ಕ) ವೃಂದದ ಹುದ್ದೆಗಳ ಕನ್ನಡ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷೆಗಳು ಸುಗಮವಾಗಿ ನಡೆಯಲು ಪ್ರತಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಮತ್ತು ಕಂಪ್ಯೂಟರ್, ಸೈಬರ್ ಅಂಗಡಿಗಳನ್ನು ಮುಚ್ಚಿಸುವಂತೆ ಆದೇಶಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಪರೀಕ್ಷಾರ್ಥಿಗಳಲ್ಲದ, ಪರೀಕ್ಷಾ ಉಸ್ತುವಾರಿ ಇಲ್ಲದ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಅಥವಾ ಯಾವುದೇ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆದೇಶವನ್ನು ಉಲ್ಲಂಘಿಸಿ ಪ್ರವೇಶಿಸುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಎಸ್.ದಿವಾಕರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande