ರಾಯಚೂರು, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಧನಕ್ಕಾಗಿ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯಿಂದ ಪರಿಶಿಷ್ಟ ಜಾತಿಯ 02 ಮತ್ತು ಪರಿಶಿಷ್ಟ ಪಂಗಡದ 01 ಗುರಿ ನಿಗದಿಪಡಿಸಲಾಗಿದೆ. ಖರೀದಿಸಿದ ವಾಹನಕ್ಕೆ ಶೇಕಡಾ 50 ಅಥವಾ ಗರಿಷ್ಠ 3 ಲಕ್ಷರೂ.ವರೆಗೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತರು ಸೆಪ್ಟೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಮೊಬೈಲ್ ಸಂಖ್ಯೆ: 9901244116, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ರಾಯಚೂರು, ದೇವದುರ್ಗ, ಮಾನವಿ ಮೊಬೈಲ್ ಸಂಖ್ಯೆ:8050196667, ಮೀನುಗಾರಿಕೆ ಇಲಾಕೆಯ ಸಹಾಯಕ ನಿರ್ದೇಶಕರು ಸಿಂಧನೂರು, ಲಿಂಗಸೂಗೂರು, ಮಸ್ಕಿ ಮೊಬೈಲ್ ಸಂಖ್ಯೆ: 9110878145ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್