ಗದಗ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಸಲುವಾಗಿ ಸಹಾಯಧನ ಯೋಜನೆಯನ್ನು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ನೀಡಲಾಗಿರುವ 2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ, ವೆಬಸೈಟ್ ಆನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-09-2025 ರವರಗೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22231007ಕ್ಕೆ ಸಂಪರ್ಕಿಸಬಹುದು ಅಥವಾ ಇ-ಮೇಲ್ ಕಳುಹಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / lalita MP