ರಾಯಚೂರು, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಾಮಾಣಿಕತೆಯಿಂದ ಕೆಲಸ ಮಾಡುವುದಾಗಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತು ಕೊಟ್ಟಿದ್ದಾರೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರು ಹೇಳಿದರು.
ಕೃಷಿ ವಿವಿಯ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಭ್ರಷ್ಟಾಚಾರ ತಡೆಯಲು ಕೈಜೋಡಿಸಿ’ ಎನ್ನುವ ಲೋಕಾಯುಕ್ತ ಅಧಿಕಾರಿಗಳ ದೂರವಾಣಿ ಮತ್ತು ಲೋಕಾಯುಕ್ತ ಕಚೇರಿಯ ವಿಳಾಸ ಹೊಂದಿದ ಫಲಕಗಳನ್ನು ಎಲ್ಲ ಕಚೇರಿಗಳಲ್ಲು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಈಗಾಗಲೇ ಬಹುತೇಕ ಕಚೇರಿಗಳಲ್ಲಿ ಈ ಫಲಕ ಅಳವಡಿಸಲಾಗಿದೆ ಎಂದರು.
ಕಚೇರಿ ಕಾರ್ಯದಲ್ಲಿ ಶಿಸ್ತು ಮತ್ತು ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಶ್ರದ್ಧೆ ಇರಬೇಕು. ಅಂದಾಗ ಕಚೇರಿಯ ಎಲ್ಲ ಕೆಲಸ ಕಾರ್ಯಗಳು ಸುಗಮವಾಗಿ ನಡೆದು ಜನತೆಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗುತ್ತದೆ. ಈ ರೀತಿ ಬದಲಾವಣೆ ಆಗುವ ವಿಶ್ವಾಸವನ್ನು ಇಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ವ್ಯಕ್ತಪಡಿಸಿದ್ದಾರೆ ಎಂದು ಉಪ ಲೋಕಾಯುಕ್ತರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್