ಬೆಂಗಳೂರು, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸುತ್ತಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿಯಾಗಿ ಆಯ್ಕೆಯಾದ ನಂತರ ಇದು ಅವರ ಎರಡನೇ ಮೈಸೂರು ಭೇಟಿಯಾಗಿದೆ.
ಕಳೆದ ಬಾರಿ ಅವರು ದಸರಾ ಉದ್ಘಾಟನೆಗಾಗಿ ಮೈಸೂರಿಗೆ ಆಗಮಿಸಿದ್ದರು. ಇಂದು ಮಧ್ಯಾಹ್ನ 3:20ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ಆಗಮಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಲಿದ್ದಾರೆ.
ವಿಮಾನ ನಿಲ್ದಾಣದಿಂದ ನೇರವಾಗಿ ಅವರು ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ರಾತ್ರಿ 8 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ತಾಯಿ ದರ್ಶನ ಪಡೆಯಲಿದ್ದಾರೆ. ಸೆಪ್ಟೆಂಬರ್ 2ರಂದು ಬೆಳಿಗ್ಗೆ ಮೈಸೂರು ಅರಮನೆಗೆ ಭೇಟಿ ನೀಡಿ ಅರಮನೆ ವೀಕ್ಷಣೆ ಜೊತೆಗೆ ರಾಜವಂಶದ ಆತಿಥ್ಯ ಸ್ವೀಕರಿಸಲಿದ್ದಾರೆ. ನಂತರ ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ರಾಷ್ಟ್ರಪತಿಗಳು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಲಿದ್ದು, ಹೋಟೆಲ್ ಸುತ್ತಮುತ್ತ ಭದ್ರತೆ ಹೆಚ್ಚಸಿಲಾಗಿದೆ. ರಾಷ್ಟ್ರಪತಿ ಸಂಚರಿಸುವ ಮಾರ್ಗಗಳ ರಸ್ತೆಗಳನ್ನು ದುರಸ್ಥಿ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa