ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ ಆರಂಭದ ಮೊದಲು, ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆತ್ಮೀಯವಾಗಿ ಭೇಟಿಯಾದರು. ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡು ಸ್ನೇಹದ ಸಂಕೇತ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೂಡ ಹಾಜರಿದ್ದು, ಸಭೆಗೆ ವಿಶೇಷ ರಾಜತಾಂತ್ರಿಕ ಮೆರಗು ನೀಡಿತು.
ಶೃಂಗಸಭೆಯ ಹೊರತಾಗಿ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಸುಮಾರು 45 ನಿಮಿಷಗಳ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ. ಇದರಲ್ಲಿ ಭಾರತ–ರಷ್ಯಾ ದ್ವಿಪಕ್ಷೀಯ ಸಂಬಂಧಗಳು, ಜಾಗತಿಕ ಮತ್ತು ಪ್ರಾದೇಶಿಕ ಹಿತಾಸಕ್ತಿಯ ವಿಷಯಗಳು ಚರ್ಚೆಯಾಗುವ ನಿರೀಕ್ಷೆ ಇದೆ.
ಈ ಭೇಟಿಯು ಭಾರತ–ರಷ್ಯಾ ಸ್ನೇಹದ ಗಾಢತೆಯನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa