ರಾಜ್ಯದಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು, 01 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ವಿಶೇಷವಾಗಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕ
ರಾಜ್ಯದಲ್ಲಿ ಮಳೆ ಮುನ್ಸೂಚನೆ


ಬೆಂಗಳೂರು, 01 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ವಿಶೇಷವಾಗಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

ರಾಜಧಾನಿ ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 3ರವರೆಗೆ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande