ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನ ಪೂರ್ಣ ಪ್ರಮಾಣದಲ್ಲಿ ವ್ಯಯಿಸಿ
ಬಳ್ಳಾರಿ, 01 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಮತ್ತು ಕೇಂದ್ರದ ಹಲವು ಯೋಜನೆಗಳಡಿ ಇಲಾಖೆಗಳಿಗೆ ವಿವಿಧ ಉದ್ದೇಶಿತ ಯೋಜನೆಗಳಿಗಾಗಿ ಬಿಡುಗಡೆಯಾಗುವ ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ನಿಗಧಿತ ಅವಧಿಯೊಳಗೆ ಅಧಿಕಾರಿಗಳು ಖರ್ಚು ಮಾಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾ
ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನ ಪೂರ್ಣ ಪ್ರಮಾಣದಲ್ಲಿ ವ್ಯಯಿಸಿ


ಬಳ್ಳಾರಿ, 01 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಮತ್ತು ಕೇಂದ್ರದ ಹಲವು ಯೋಜನೆಗಳಡಿ ಇಲಾಖೆಗಳಿಗೆ ವಿವಿಧ ಉದ್ದೇಶಿತ ಯೋಜನೆಗಳಿಗಾಗಿ ಬಿಡುಗಡೆಯಾಗುವ ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ನಿಗಧಿತ ಅವಧಿಯೊಳಗೆ ಅಧಿಕಾರಿಗಳು ಖರ್ಚು ಮಾಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜುಲೈ-2025ರ ಅಂತ್ಯದವರೆಗಿನ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಕಾರ್ಯಕ್ರಮಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಶೀಘ್ರ ತಲುಪಿಸಲು ಕ್ರಮ ವಹಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಮಾತನಾಡಿ, 2025-26 ನೇ ಸಾಲಿನ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಜುಲೈ ಅಂತ್ಯದವರೆಗೆ ವಿವಿಧ ಇಲಾಖೆಗಳಿಗೆ ಒಟ್ಟಾರೆ ರೂ.43128.48 ಲಕ್ಷ ಅನುದಾನ ಹಂಚಿಕೆಯಾಗಿದೆ. ಅದರಲ್ಲಿ ರೂ.8557.99 ಲಕ್ಷ ಬಿಡುಗಡೆಯಾಗಿದ್ದು, ಈ ಪೈಕಿ ರೂ.7848.60 ಲಕ್ಷ ಮಾತ್ರ ಖರ್ಚು ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಬಿಡುಗಡೆಯಾದರು ಅನುದಾನವನ್ನು ಖರ್ಚು ಮಾಡಿಲ್ಲವೆಂದರೆ ಅದು ತಪ್ಪಾಗಲಿದೆ. ಬಾಕಿಯಿರುವ ಎಲ್ಲಾ ಅನುದಾನವನ್ನು ಸೆಪ್ಟೆಂಬರ್ ಅಂತ್ಯದೊಳಗೆ ಅಭಿವೃಧಿಗಾಗಿ ಬಳಸಿ ಇಲ್ಲವಾದಲ್ಲಿ ಅನುದಾನ ಕೈ ತಪ್ಪಿ ಹೋಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಸೇರಿದಂತೆ ಕೃಷಿ, ತೋಟಗಾರಿಕೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande