ಧರ್ಮಸ್ಥಳ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳದ ತಲೆಬುರುಡೆ ಪ್ರಕರಣದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಧರ್ಮಸ್ಥಳ ಚಲೋ ನಮ್ಮ ನಡಿಗೆ ಧರ್ಮದೆಡೆಗೆ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ , ಧರ್ಮಸ್ಥಳದ ವಿರುದ್ಧ ರೂಪಿಸಿರುವ ದುಷ್ಟ ಶಕ್ತಿಗಳ ಷಡ್ಯಂತ್ರ ತಾರ್ಕಿಕ ಅಂತ್ಯ ಕಾಣುವವರೆಗೂ ಧರ್ಮಯುದ್ಧ ನಿಲ್ಲಿಸುವ ಮಾತೇ ಇಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ಪರ ಸಂಘಟನೆಗಳಿಗೆ ಕಿರುಕುಳ ನೀಡಿ, ಹಿಂದೂ ವಿರೋಧಿ ದುಷ್ಟರಿಗೆ ಕುಮ್ಮಕ್ಕು ನೀಡುತ್ತಿದೆ. ಧರ್ಮಸ್ಥಳ ಹಾಗೂ ಚಾಮುಂಡೇಶ್ವರಿ ದೇವಾಲಯವನ್ನು ಗುರಿಯಾಗಿಸಿಕೊಂಡು ಹಿಂದೂ ವಿರೋಧಿ ಕಾರ್ಯಯೋಜನೆ ಜಾರಿಯಲ್ಲಿದೆ. ಆದರೆ ಈ ನಾಡಿನ ಜನತೆ ಅದಕ್ಕೆ ಬಗ್ಗುವುದಿಲ್ಲ ಎಂದರು.
ಅನಾಮಿಕ ದೂರು ಆಧರಿಸಿ ಎಸ್‌ಐಟಿ ರಚಿಸಿರುವುದು ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆಯುಂಟುಮಾಡುವ ಕುತಂತ್ರ. ಇದರ ಹಿಂದೆ ವಿದೇಶಿ ಶಕ್ತಿಗಳ ಕೈವಾಡ ಇರುವ ಸಾಧ್ಯತೆ ಸ್ಪಷ್ಟವಾಗುತ್ತಿದೆ. ಸತ್ಯವನ್ನು ಕಾಂಗ್ರೆಸ್ ಸರ್ಕಾರ ಹೊರಹಾಕುವುದಿಲ್ಲ, ಆದ್ದರಿಂದ ಎನ್‌ಐಎ ಅಥವಾ ಸಿಬಿಐ ತನಿಖೆಯೊಂದೇ ಈ ಪ್ರಕರಣಕ್ಕೆ ಶಾಶ್ವತ ಉತ್ತರ ನೀಡಬಲ್ಲದು ಎಂದು ವಿಜಯೇಂದ್ರ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa