ಬಳ್ಳಾರಿ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಸಮೀಕ್ಷಾ ಕಾರ್ಯವು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ನಿರ್ದೇಶನ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕಾಗಿ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಏರ್ಪಡಿಸಿದ್ದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಗಾಗಲೇ ಮೊದಲ ಹಂತದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ವಿದ್ಯುತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಿದ್ದು ಎರಡನೇ ಹಂತದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ.
ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದ್ದಾರೆ.
ಇಂಧನ ಇಲಾಖೆಯಿಂದ ಮನೆಗಳ ಆರ್‍ಆರ್ ನಂಬರ್‍ಗಳಿಗೆ ಜಿಯೋ ಟ್ಯಾಗ್ ಮಾಡಿದ ಮನೆಗಳಿಗೆ ಸ್ಟಿಕರ್ ಅಂಟಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಜಿಲ್ಲಾ ಅಂಕಿ-ಸಂಖ್ಯೆ ಸಂಗ್ರಹಣಾಧಿಕಾರಿ ಪತ್ರಿಬಸಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕುಗಳ ತಹಶೀಲ್ದಾರರು, ಇಒಗಳು, ನಗರ ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್