ವಿಜಯಪುರ, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.
6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ದಿನಾಂಕ : 06-09-2025ರೊಳಗೆ ನೊಂದಾಯಿಸಿಕೊಳ್ಳಬೇಕು.
ನೊಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಗೀತಾ ಭಜಂತ್ರಿ ಮೊ: 9986054750 ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande