ಮಂಗಳೂರು, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಂಗಳೂರು ನಗರದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಸುಗಂಧದ್ರವ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಅಗ್ನಿ ವ್ಯಾಪಕವಾಗಿ ಹರಡಿದೆ. ಸಂಪೂರ್ಣ ಘಟಕವೇ ಸುಟ್ಟು ಕರಕಲಾಗಿದೆ.
ಎಂಸಿಎಫ್, ಎನ್‌ಎಂಪಿಎ ಮತ್ತು ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ಧಾರೆ.
ಘಟನೆಯಲ್ಲಿ ಅಪಾರ ಪ್ರಮಾಣದ ಆಸ್ತಿ ನಷ್ಟ ಉಂಟಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡದ ನಿಖರ ಕಾರಣ ಪತ್ತೆ ಮಾಡಲು ತನಿಖೆ ಪ್ರಾರಂಭವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa