ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕೆ ಅರ್ಜಿ
ವಿಜಯಪುರ, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ೨೦೨೫-೨೬ನೇ ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಮತ್ತು ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆಗಳ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆಯಂತ್ರ ಸಲಕರಣೆಯನ್ನು ಗ್ರಾಮೀಣ ಪ್ರದೇಶದವರಿಗೆ ನೀಡಲು
ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕೆ ಅರ್ಜಿ


ವಿಜಯಪುರ, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ೨೦೨೫-೨೬ನೇ ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಮತ್ತು ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆಗಳ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆಯಂತ್ರ ಸಲಕರಣೆಯನ್ನು ಗ್ರಾಮೀಣ ಪ್ರದೇಶದವರಿಗೆ ನೀಡಲು ಅರ್ಹ ಫಲಾನುವಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗ್ರಾಮೀಣ ಪ್ರದೇಶದ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದಾಗಿದ್ದು, ೧೦ನೇ ತರಗತಿ ಪಾಸಾಗಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ ೨೬ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗ, ಕೊಠಡಿ ಸಂಖ್ಯೆ ೨೩೯, ೩ನೇ ಮಹಡಿ, ಜಿಲ್ಲಾಡಳಿತ ಭವನ ನವನಗರ, ಬಾಗಲಕೋಟೆ, ದೂಸಂ.೦೮೩೫೪-೨೨೩೭೪೪, ೭೭೬೦೦೦೭೦೮೦ ಮತ್ತು ೯೬೨೦೭೨೧೭೨೯ ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande