ಹೊಸಪೇಟೆ, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದವರೆಗೆ ವಸತಿ ರಹಿತ, ಟೆಂಟು ಹಾಗೂ ಗುಡಾರಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವ ಅರ್ಹ ಫಲಾನುಭವಿಗಳಿಗೆ ಟಾರ್ಪಲ್‍ಗಳನ್ನು ನಿಗಮದಿಂದ ನೀಡುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ವೈ.ಎ.ಕಾಳೆ ತಿಳಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದ ಅರ್ಹ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲ್ಲೂಕು ಕಚೇರಿ ಹಾಗೂ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಅರ್ಜಿಯನ್ನು ಪಡೆದು ಸೆ.15 ರೊಳಗಾಗಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಯಾ ಕಚೇರಿಯಲ್ಲಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್