ಶಿವಮೊಗ್ಗ, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಕಿರು ನೇರ ಸಾಲ ಯೋಜನೆ, ಚರ್ಮಕಾರರ ವಸತಿ ಯೋಜನೆ ಮತ್ತು ಚರ್ಮ ಕುಶಲಕರ್ಮಿಗಳ ಕುಟುಂಬಗಳ ಯುವಜನರಿಗೆ ಹೊಸ ತಂತ್ರಜ್ಞಾನ ವಿನ್ಯಾಸಗಳು ಹಾಗೂ ಮಾರುಕಟ್ಟೆ ಬೇಡಿಕೆಗಳ ಬಗ್ಗೆ ದೆಹಲಿ, ತಮಿಳುನಾಡು, ಮಹಾರಾಷ್ಟ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆಗೆ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು https://sevasindhu.karnataka.gov.in, https://sevasindhuservices.karnataka.gov.in ಪೋರ್ಟಲ್ ಮೂಲಕ ಅ. 08 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕರು/ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್‌ಕರ್, ನೆಹರು ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊ.ಸಂ.: 8904510699 ನ್ನು ಸಂಪರ್ಕಿಸುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa