ಶಿವಮೊಗ್ಗ, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೆಫೆಕ್ ಸಂಸ್ಥೆ- ಬೆಂಗಳೂರು ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ ನಾಳೆ ಬೆಳಗ್ಗೆ 10.00ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಗಳ ಕುರಿತು ಅರ್ಧ ದಿನ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ಸ್ಥಾಪನೆ ,ಅಭಿವೃದ್ಧಿಗೆ ಸುವರ್ಣಾಕಾಶವಿದ್ದು, ಜಿಲ್ಲೆಯ ವೈಯಕ್ತಿಕ ಕಿರು ಉದ್ದಿಮೆಗಳು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಎಲ್ಲಾ ರೈತರು,ಉದ್ದಿಮೆದಾರರು ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa