ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಅನ್ಯಾಯವೆಸಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ʼಬೆಂಗಳೂರು ಚಲೋʼ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಪಾಲ್ಗೊಂಡು ಹೋರಾಟಗಾರರಿಗೆ ಬಲ ತುಂಬಿದರು.
ಈ ಸಂದರ್ಭದಲ್ಲಿ ನಾನಾ ಸಮುದಾಯಗಳ ಸ್ವಾಮೀಜಿಗಳು, ಮಾಜಿ ಸಂಸದರಾದ ಡಾ. ಉಮೇಶ್ ಜಾಧವ್, ಶಾಸಕರಾದ ಪ್ರಭು ಚೌಹಾಣ್, ಎಂ. ಚಂದ್ರಪ್ಪ, ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸುನೀಲ್ ವಲ್ಯಾಪುರೆ, ಮಾಜಿ ಶಾಸಕರಾದ ಪಿ. ರಾಜೀವ್, ದೇವನಹಳ್ಳಿ ಚಂದ್ರಪ್ಪ, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಮಾಜಿ ಸಚಿವರು, ಮಾಜಿ ಶಾಸಕರು, ಸಮುದಾಯಗಳ ಮುಖಂಡರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa