ಬೀದರ್ ವಿವಿಯಲ್ಲಿ ಭ್ರಷ್ಟಾಚಾರ ಆರೋಪ : ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೀದರ್​​ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ 69 ಕಡೆ ದಾಳಿ ನಡೆಸಿದ್ದಾರೆ. ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ
Raid


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೀದರ್​​ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ 69 ಕಡೆ ದಾಳಿ ನಡೆಸಿದ್ದಾರೆ.

ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಭ್ರಷ್ಟಾಚಾರ ಆರೋಪ ಸಂಬಂಧ ಬೀದರ್ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿತ್ತು. ಬೆಂಗಳೂರು ಮೂಲದ ವೆಂಕಟ್ ರೆಡ್ಡಿ ಎಂಬುವರು ದೂರು ನೀಡಿದ್ದರು. 2021ರಲ್ಲಿ ವಿವಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಿದ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಬೀದರ್ ಜಿಲ್ಲೆಯ 24 ಸ್ಥಳ, ಬೆಂಗಳೂರಿನ 31 ಸ್ಥಳ, ಕೊಪ್ಪಳ 2 , ಚಿಕ್ಕಮಗಳೂರು ಜಿಲ್ಲೆಯ 2 ಸ್ಥಳ, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿದಂತೆ ರಾಜ್ಯಾದ್ಯಂತ 69 ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಳ್ಳಲಾಗಿದೆ.

2021 ಅಕ್ಟೋಬರ್ 4ರಂದು 35 ಕೋಟಿ ರೂ. ಹಗರಣ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿಲಾಗಿದೆ. ಈ ಸಂಬಂಧ ಲೋಕಾಯುಕ್ತ ನಡೆಸಿದ ತನಿಖೆಯಲ್ಲಿ, 22 ಕೋಟಿ ಹಗರಣ ನಡೆದಿರುವುದು ಪತ್ತೆಯಾಗಿತ್ತು.

ಲೋಕಾಯುಕ್ತ ಎಡಿಜಿಪಿ ಮನೀಷ್ ಖರ್ಬಿಕರ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande