ನಾಗರಿಕ ಸೌಲಭ್ಯ ನಿವೇಶನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಶಿವಮೊಗ್ಗ, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರಿಕ ಸೌಲಭ್ಯ ನಿವೇಶನಗಳನ್ನು 1991ರ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಾಗರಿಕ ಸೌಲಭ್ಯ ನಿವೇಶನಗಳ ಹಂಚಿಕೆ ನಿಯಮದನ್ವಯ ಅರ್ಹ
ನಾಗರಿಕ ಸೌಲಭ್ಯ ನಿವೇಶನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಶಿವಮೊಗ್ಗ, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರಿಕ ಸೌಲಭ್ಯ ನಿವೇಶನಗಳನ್ನು 1991ರ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಾಗರಿಕ ಸೌಲಭ್ಯ ನಿವೇಶನಗಳ ಹಂಚಿಕೆ ನಿಯಮದನ್ವಯ ಅರ್ಹ ನೊಂದಾಯಿತ ಸಂಘ ಸಂಸ್ಥೆಗಳು ,ಕೇಂದ್ರ , ರಾಜ್ಯ , ಅರೆ ಸರ್ಕಾರಿ , ನಿಗಮ ಮಂಡಳಿಗಳಿಂದ ಹಂಚಿಕೆಗಾಗಿ ಜುಲೈ 29ರಂದು ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಸದರಿ ಪ್ರಕಟಣೆಯಲ್ಲಿ ನಾಗರಿಕ ಸೌಲಭ್ಯ ನಿವೇಶನ ಮಂಜೂರಾತಿ ಅರ್ಜಿ ನಮೂನೆ-1 ಮತ್ತು ನಮೂನೆ-2 ನ್ನು ಪಡೆಯಲು ದಿನಾಂಕ:15-09-2025 ರವರೆಗೆ, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ನಿಗಧಿಪಡಿಸಲಾಗಿದ್ದ ದಿನಾಂಕವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ದಿನಾಂಕ:17-09-2025 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಹಾಗೂ ಕಚೇರಿ ದೂರವಾಣಿ ನಂ. 08182-248887 ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande