ಗಣೇಶ ಮೂರ್ತಿ ವಿಸರ್ಜನೆ : ಸೆ.16 ರವರೆಗೆ ಮದ್ಯ ಮಾರಾಟ ನಿಷೇಧ
ಕೊಪ್ಪಳ, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗಂಗಾವತಿ ನಗರ ಹಾಗೂ ತಾವರಗೇರಾ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಗಂಗಾವತಿ
ಗಣೇಶ ಮೂರ್ತಿ ವಿಸರ್ಜನೆ : ಸೆ.16 ರವರೆಗೆ ಮದ್ಯ ಮಾರಾಟ ನಿಷೇಧ


ಕೊಪ್ಪಳ, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗಂಗಾವತಿ ನಗರ ಹಾಗೂ ತಾವರಗೇರಾ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಸೆಪ್ಟೆಂಬರ್ 16 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ತಾವರಗೇರಾ ಪಟ್ಟಣದಲ್ಲಿ ಸೆಪ್ಟೆಂಬರ್ 11 ರಂದು ಹಾಗೂ ಗಂಗಾವತಿ ನಗರದಲ್ಲಿ ಸೆಪ್ಟೆಂಬರ್ 12 ಮತ್ತು ಸೆ.16 ರಂದು ಗಣೇಶ ಮೂರ್ತಿ ವಿಸರ್ಜನೆ ಇರುವುದರಿಂದ ಆಯಾ ದಿನಗಳಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ನಿಯಮಾನುಸಾರ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande