ಕೊಪ್ಪಳ, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಸಂಸ್ಥೆಯಿಂದ ಉಚಿತವಾಗಿ ಎಲೆಕ್ಟ್ರಿಕ್ ಹೌಸ್ ವೈರಿಂಗ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ ಯುವತಿರಿಯರಿಗೆ ನವೆಂಬರ್ ಮೊದಲನೇ ವಾರದಲ್ಲಿ 30 ದಿನಗಳ ಎಲೆಕ್ಟ್ರಿಕ್ ಹೌಸ್ ವೈರಿಂಗ್ ತರಬೇತಿಯನ್ನು ಆರಂಭಿಸಲಾಗುತ್ತದೆ. ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಆಸಕ್ತರು ವೆಬ್‍ಸೈಟ್ https://forms.gle/CqDK1qiRfJyagvCW7 ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಮೊ.ನಂ. 9483485489 ಗೆ ವಾಟ್ಸಪ್‍ನಲ್ಲಿ hi ಎಂದು ಸಂದೇಶ ಕಳಿಸಿ ಕೂಡ ಅರ್ಜಿ ಸಲ್ಲಿಸಬಹುದು ಅಥವಾ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ಕರೆಯ ಮೂಲಕ ಹಾಗೂ ತಮ್ಮ ಹೆಸರು, ವಿಳಾಸ ಗಳನ್ನು ಬರೆದು ವಾಟ್ಸಪ್ ಮಾಡುವ ಮೂಲಕವೂ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ: 8970145354, 9482188780 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್