ಭಾರತ ಮತ್ತು ಅಮೆರಿಕ ನಿಕಟ ಸ್ನೇಹಿತರು : ಪ್ರಧಾನಿ ಮೋದಿ
ನವದೆಹಲಿ, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಅಮೆರಿಕ ನಿಕಟ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಮ್ಮ ವ್ಯಾಪಾರ ಮಾತುಕತೆಗಳು ಭಾರತ-ಅಮೆರಿಕ ಪಾಲುದಾರಿಕೆಯ ಅಪರಿಮಿತ ಸಾಮರ್ಥ್ಯವನ್ನು ಅನ್ಲಾಕ್ ಮಾಡಲು ದಾರಿ ಮಾಡಿಕೊಡುತ್ತವೆ ಎಂದು ನನಗೆ ವಿಶ್ವಾಸವಿದೆ. ನಮ್ಮ ತಂಡಗಳು ಈ ಚರ್ಚೆಗಳ
Pm


ನವದೆಹಲಿ, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಭಾರತ ಮತ್ತು ಅಮೆರಿಕ ನಿಕಟ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಮ್ಮ ವ್ಯಾಪಾರ ಮಾತುಕತೆಗಳು ಭಾರತ-ಅಮೆರಿಕ ಪಾಲುದಾರಿಕೆಯ ಅಪರಿಮಿತ ಸಾಮರ್ಥ್ಯವನ್ನು ಅನ್ಲಾಕ್ ಮಾಡಲು ದಾರಿ ಮಾಡಿಕೊಡುತ್ತವೆ ಎಂದು ನನಗೆ ವಿಶ್ವಾಸವಿದೆ. ನಮ್ಮ ತಂಡಗಳು ಈ ಚರ್ಚೆಗಳನ್ನು ಆದಷ್ಟು ಬೇಗ ಮುಗಿಸಲು ಕೆಲಸ ಮಾಡುತ್ತಿವೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಎರಡೂ ದೇಶದ ಜನರಿಗೆ ಉಜ್ವಲ, ಹೆಚ್ಚು ಸಮೃದ್ಧ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande