ಕೊಪ್ಪಳ : ಇಂಡಿಯಾ ಸ್ಕಿಲ್ಸ್ ಸ್ಪರ್ಧೆ-2025 ; ನೋಂದಣಿ
ಕೊಪ್ಪಳ, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ(ಕೆ.ಎಸ್.ಡಿ.ಸಿ) ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-2025 ನ್ನು ಪ್ರಾರಂಭಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು. ಈ ಸ್ಪರ್ಧೆಯ ವಿಜೇತರಿಗೆ ಸುಧಾರಿತ ತರಬೇತಿ ನೀಡಲಾಗುತ್ತದೆ. ಅವರು ಮುಂದ
ಕೊಪ್ಪಳ : ಇಂಡಿಯಾ ಸ್ಕಿಲ್ಸ್ ಸ್ಪರ್ಧೆ-2025 ; ನೋಂದಣಿ


ಕೊಪ್ಪಳ, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ(ಕೆ.ಎಸ್.ಡಿ.ಸಿ) ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-2025 ನ್ನು ಪ್ರಾರಂಭಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು.

ಈ ಸ್ಪರ್ಧೆಯ ವಿಜೇತರಿಗೆ ಸುಧಾರಿತ ತರಬೇತಿ ನೀಡಲಾಗುತ್ತದೆ. ಅವರು ಮುಂದಿನ ವರ್ಲ್ಡ್ ಸ್ಕಿಲ್ಸ್-2026 ಶಾಂಘೈ, ಚೀನಾದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾರತದಿಂದ ಪ್ರತಿನಿಧಿಸುವ ಅವಕಾಶ ಪಡೆಯಲಿದ್ದಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಆಸಕ್ತ ಯುವಕ-ಯುವತಿಯರು ಮತ್ತು ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಪ್ರದರ್ಶಿಸಲು ಈ ಅವಕಾಶವನ್ನು ಬಳಸಿಕೊಳ್ಳಬೇಕು.

ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 30 ರಂದು ಮುಕ್ತಾಯಗೊಳ್ಳಲಿದ್ದು, www.skillindiadigital.gov.in/home ವೆಬ್‌ಪೋರ್ಟಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವುದರ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande