ರಾಯಚೂರು, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಯಚೂರು ತಾಲೂಕಿನ ಗುಂಜಳ್ಳಿ ಪ್ರೌಢಶಾಲೆಯಲ್ಲಿ ಸೆಪ್ಟೆಂಬರ್ 9ರಂದು ಮಿಷನ್ ಶಕ್ತಿ ಯೋಜನೆಯ 10 ದಿನಗಳ ವಿಶೇಷ ಜಾಗೃತಿ ಅಭಿಯಾನ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದಿಂದ ವಿದ್ಯಾರ್ಥಿನಿಯರಿಗೆ ನಡೆದ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ತಜ್ಞ ಗಿರಿಜಾ ಉದ್ಘಾಟಿಸಿದರು.
ಬಾಲಕಿಯರಿಗೆ ವೈಯಕ್ತಿಕ ಶುಚಿತ್ವ, ಸ್ನೇಹ ಕ್ಲಿನಿಕ್, 1098 ಮಕ್ಕಳ ಸಹಾಯವಾಣಿ, ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ ಹಾಗೂ ಮೊಬೈಲ್ ಬಳಕೆಯ ದುಷ್ಪರಿಣಾಮದ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು.
ಬಾಲಕಿಯರು ಗರ್ಭಿಣಿಯರಾಗುತ್ತಿರುವ ವಿಷಯ, ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳಾದ ಅನುಸೂಯ, ಸಹ ಶಿಕ್ಷಕರಾದ ಎಂ ಶಾರದಾ, ಪೂರ್ಣಿಮಾ, ಮಹಿಳಾ ಸಬಲೀಕರಣ ಘಟಕದ ವಿಜಯಲಕ್ಷ್ಮಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್