ಕೊಪ್ಪಳ, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅಕ್ಟೋಬರ್ 2 ರಂದು ಮಹಾರಾಷ್ಟ್ರದ ನಾಗಪುರದಲ್ಲಿ ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರವರ್ತನಾ ದಿನದಲ್ಲಿ(ವಿಜಯ ದಶಮಿ ದಿನದಂದು) ಪಾಲ್ಗೊಳ್ಳುವ ಅನುಯಾಯಿಗಳಿಗೆ ಯಾತ್ರೆಗೆ ತೆರಳಲು ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://swd.karnataka.gov.in ನಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಸೆ.9 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಸದ್ಯ ಇಲಾಖೆಯ ಆಯುಕ್ತರ ನಿರ್ದೇಶನದನ್ವಯ ಆನ್‍ಲೈನ್ ಅರ್ಜಿ ಸಲ್ಲಿಕೆ ಅವಧಿಯನ್ನು ಸೆ.15 ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅವರನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್