ಕೊಪ್ಪಳ, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲೆಯ ಹಿರಿಯ ನಾಗರಿಕರಿಗೆ ಸೆಪ್ಟೆಂಬರ್ 15 ರಂದು ಕೊಪ್ಪಳ ತಾಲ್ಲೂಕು ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
60 ರಿಂದ 70 ವರ್ಷದ ಪುರುಷ ಹಾಗೂ ಮಹಿಳೆಯರಿಗೆ ಮ್ಯೂಸಿಕಲ್ ಚೇರ್, 60 ರಿಂದ 69 ವರ್ಷ ಹಾಗೂ 70 ವರ್ಷ ಮತ್ತು ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಬಿರುಸಿನ ನಡಿಗೆ ಸ್ಪರ್ಧೆ, ಬಕೆಟ್‍ನಲ್ಲಿ ಬಾಲ್ ಎಸೆಯುವ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 60 ರಿಂದ 69 ವರ್ಷ ಹಾಗೂ 70 ವರ್ಷ ಮತ್ತು ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಗಾಯನ ಸ್ಪರ್ಧೆ ಮತ್ತು ಏಕ ಪಾತ್ರಾಭಿನಯದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ಹಿರಿಯ ನಾಗರಿಕರು ಸ್ಪರ್ಧೆಯ ದಿನದಂದು ತಮ್ಮ ಗುರುತಿನ ಚೀಟಿ ಹಾಗೂ ವಯಸ್ಸಿನ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು. ಈ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ಜಿಲ್ಲಾ ಮಟ್ಟದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ವೇದಿಕೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539-295496 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್