ಬಿಸಿಎಂ ಹಾಸ್ಟೇಲ್‍ಗೆ ಹೊಸ ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಯಚೂರು, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಲಯಗಳಿಗೆ ವೃತ್ತಿಪರ ಪದವಿ ಮತ್
ಬಿಸಿಎಂ ಹಾಸ್ಟೇಲ್‍ಗೆ ಹೊಸ ಪ್ರವೇಶಕ್ಕೆ ಅರ್ಜಿ ಆಹ್ವಾನ


ರಾಯಚೂರು, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿನಿಲಯಗಳಿಗೆ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು.

ಆಸಕ್ತ ವಿದ್ಯಾರ್ಥಿಗಳು, ಎಸ್‍ಹೆಚ್‍ಪಿ ತಂತ್ರಾಶದ ಮೂಲಕ ಅಕ್ಟೋಬರ್ 04ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 08ರಂದು ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲಿದ್ದಾರೆ.

ಅಕ್ಟೋಬರ್ 10ರಂದು ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅಕ್ಟೋಬರ್ 15ರೊಳಗಾಗಿ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಅಂತಿಮ ದಿನಾಂಕವಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande