ಸಿ.ಟಿ ರವಿ ಮೇಲೆ ಪ್ರಕರಣ, ಹೋರಾಟದ ಭಾಗ-ವಿಜಯೇಂದ್ರ
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ ಹಾರಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವ ಕಾಂಗ್ರೆಸ್ ಸರ್ಕಾರ ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿರುವ
ಸಿ.ಟಿ ರವಿ ಮೇಲೆ ಪ್ರಕರಣ, ಹೋರಾಟದ ಭಾಗ-ವಿಜಯೇಂದ್ರ


ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ ಹಾರಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವ ಕಾಂಗ್ರೆಸ್ ಸರ್ಕಾರ ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿರುವ ಸಿ.ಟಿ.ರವಿ ಅವರ ಮೇಲೆ ಪ್ರಕರಣ ದಾಖಲಿಸುವ ಮೂಲಕ ತಮ್ಮದು ಪಕ್ಷಪಾತಿ ಸರ್ಕಾರ, ವಿದ್ರೋಹಿಗಳಿಗೆ ಕುಮ್ಮಕ್ಕು ನೀಡುವ ಸರ್ಕಾರ ಎನ್ನುವುದನ್ನು ಸಾಕ್ಷೀಕರಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭಾರತೀಯತೆ, ಹಿಂದುತ್ವದ ಪರ ಹೋರಾಡುವುದು ಭಾರತೀಯ ಜನತಾ ಪಾರ್ಟಿಯ ಪರಮ ಆದ್ಯತೆ, ಅದನ್ನು ಹತ್ತಿಕ್ಕಲು ಎಷ್ಟೇ ಪ್ರಯತ್ನಿಸಿದರು ಅದನ್ನು ಮೆಟ್ಟಿ ನಿಲ್ಲುವ ಶಕ್ತಿ ಬಿಜೆಪಿಯ ಪ್ರತಿ ಕಾರ್ಯಕರ್ತರಿಗೂ ಇದೆ. ನಮ್ಮ ಪಕ್ಷದ ಪ್ರಮುಖರಾದ ಸಿ.ಟಿ ರವಿ ಅವರ ಮೇಲೆ ದಾಖಲಾಗಿರುವ ಪ್ರಕರಣ, ಹೋರಾಟದ ಒಂದು ಭಾಗವೆಂದು ನಾವು ಸ್ವೀಕರಿಸಿದ್ದೇವೆ, ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ಜನರೇ ಧಿಕ್ಕರಿಸಲಿದ್ದಾರೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande