ವಿಜಯಪುರ, 11 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಕೀಲ ಸಮೂಹಕ್ಕೆ ಅಪಮಾನಕರವಾಗುವ ರೀತಿಯಲ್ಲಿ ಮಾತನಾಡಿಲ್ಲ. ಕೆಲವರು ಅವರ ಹೇಳಿಕೆಯನ್ನು ತಿರುಚಿ ರಾಜಕೀಯ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಚಂದ್ರಶೇಖರ ರಾಠೋಡ ಆರೋಪಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಾಗ ಮುಳುಗಡೆ ಸಂತ್ರಸ್ತರ ಜಮೀನಿಗೆ ಪರಿಹಾರ ನೀಡುವ ವಿಷಯದಲ್ಲಿ ವಕೀಲರು ನಿಮ್ಮ ದಾರಿ ತಪ್ಪಿಸಬಹುದು ಎಂದು ಮಾತನಾಡಿದ್ದಾರೆ. ಹೊರತು ಅವಮಾನಿಸುವ ನಿಟ್ಟಿನಲ್ಲಿ ಮಾತನಾಡಿಲ್ಲ ಎಂದರು.
ಕೃಷ್ಣ ಮೇಲ್ದಂಡೆ ಯೋಜನೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅವರು ಮಾತನಾಡಿದ್ದಾರೆ. ಅದರ ಹಿಂದೆ ಯಾವುದೇ ದುರದ್ದೇಶ ಇರಲಿಲ್ಲ ಎಂದು ಅರಿತುಕೊಳ್ಳಬೇಕು ಎಂದು ಹೇಳಿದರು.
ಉಪ ಮುಖ್ಯಮಂತ್ರಿಗಳು, ವಕೀಲರು ಮತ್ತು ಅವರ ವೃತ್ತಿಯ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಸ್ವತ ತಮ್ಮ ಮಗನಿಗೆ ಕಾನೂನು ಪದವಿ ಅಭ್ಯಾಸ ಮಾಡಿಸುತ್ತಿದ್ದಾರೆ. ಇದು ಅವರಿಗೆ ವಕೀಲರು ಮತ್ತು ಕಾನೂನಿನ ಬಗ್ಗೆ ಇರುವ ಅಪಾರ ಕಾಳಜಿಯನ್ನು ತೋರಿಸುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande