ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಇಂದು 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
1950ರ ಸೆಪ್ಟೆಂಬರ್ 11ರಂದು ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಜನಿಸಿದ ಭಾಗವತ್, ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಬಳಿಕ ಆರ್‌ಎಸ್‌ಎಸ್ ಪ್ರಚಾರಕರಾಗಿ ಸಂಘಟನಾ ಕಾರ್ಯಕ್ಕೆ ತೊಡಗಿಕೊಂಡರು. 2009ರಲ್ಲಿ ಅವರು ಸಂಘದ ಆರನೇ ಸರಸಂಘಚಾಲಕರಾದರು.
ಅವರ ನಾಯಕತ್ವದಲ್ಲಿ ಸಂಘವು ಗ್ರಾಮಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಪರಿಸರ ಹಾಗೂ ಸೇವಾ ಕಾರ್ಯಗಳಲ್ಲಿ ಹಲವು ಉಪಕ್ರಮಗಳನ್ನು ಕೈಗೊಂಡಿದೆ. ಕೋವಿಡ್-19 ಸೇರಿದಂತೆ ವಿವಿಧ ವಿಪತ್ತುಗಳಲ್ಲಿ ಸಂಘವು ದೊಡ್ಡ ಮಟ್ಟದ ಪರಿಹಾರ ಕಾರ್ಯ ನಡೆಸಿದೆ.
2025-26ರ ಶತಮಾನೋತ್ಸವ ಆಚರಣೆಗೆ ಸಂಘ ಸಿದ್ಧತೆ ನಡೆಸುತ್ತಿದ್ದು, ದೇಶ-ವಿದೇಶಗಳಲ್ಲಿ ತನ್ನ ಚಟುವಟಿಕೆಗಳನ್ನು ವಿಸ್ತರಿಸಿದೆ. ಭಾಗವತ್ ಅವರು ಕುಟುಂಬ ಮೌಲ್ಯಗಳು, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸಂರಕ್ಷಣೆಗೆ ಒತ್ತು ನೀಡುತ್ತಾ, ಸಾಮಾಜಿಕ ಸಾಮರಸ್ಯ ಮತ್ತು ಸಕಾರಾತ್ಮಕ ಬದಲಾವಣೆಯತ್ತ ದೇಶವನ್ನು ಪ್ರೇರೇಪಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa