ಕೊಪ್ಪಳ , 11 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಇ.ಎಚ್.ಟಿ., ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಸೆ. 16 ರಂದು ಬೆಳಗ್ಗೆ 11 ಗಂಟೆಗೆ ನಗರದ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿಯ ಅಧೀಕ್ಷಕ ಅಭಿಯಂತರರು ವಹಿಸಲಿದ್ದು, ಸಂಬಂಧಿಸಿದ ಇ.ಹೆಚ್.ಟಿ., ಹೆಚ್.ಟಿ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ, ಸದುಪಯೋಗ ಪಡೆದುಕೊಳ್ಳಬೇಕು ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನಾ ಕೊಪ್ಪಳ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್