ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಷ್ಯಾದ ಸೈನ್ಯಕ್ಕೆ ಸೇರುವ ಪ್ರಯತ್ನದಿಂದ ದೂರವಿರಲು ಭಾರತೀಯ ನಾಗರಿಕರಿಗೆ ವಿದೇಶಾಂಗ ಸಚಿವಾಲಯ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ರಷ್ಯಾದ ಸೇನೆಯಲ್ಲಿ ಭಾರತೀಯರ ನೇಮಕಾತಿಯ ವಿಚಾರ ಗಮನ ಸೆಳೆದಿದ್ದು, ಇದರಿಂದ ಉಂಟಾಗಬಹುದಾದ ಅಪಾಯಗಳನ್ನು ಸಚಿವಾಲಯ ಸ್ಪಷ್ಟವಾಗಿ ತಿಳಿಸಿದೆ.
ವಿದೇಶಾಂಗ ಸಚಿವಾಲಯದ ವಕ್ತಾರರು ಈ ಕುರಿತು ಮಾಹಿತಿ ನೀಡಿದ್ದು, ಕಳೆದ ಒಂದು ವರ್ಷದಿಂದ ಸರ್ಕಾರವು ಈ ಸಂಬಂಧ ಹಲವು ಬಾರಿ ಎಚ್ಚರಿಕೆ ನೀಡಿದೆ. ರಷ್ಯಾದ ಸೇನೆಯಲ್ಲಿ ಸೇವೆ ಸಲ್ಲಿಸುವುದು ಭಾರತೀಯರಿಗೆ ಅಪಾಯಕಾರಿ ಹಾಗೂ ಗಂಭೀರ ಪರಿಣಾಮಗಳನ್ನುಂಟುಮಾಡುವ ಸಾಧ್ಯತೆ ಇದೆ. ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ನಮ್ಮ ನಾಗರಿಕರನ್ನು ಬಿಡುಗಡೆ ಮಾಡಲು ಹಾಗೂ ಈ ನೇಮಕಾತಿ ಪದ್ಧತಿಯನ್ನು ನಿಲ್ಲಿಸಲು ನಾವು ಒತ್ತಾಯಿಸಿದ್ದೇವೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa